ರಾಯಚೂರು ನವೆಂಬರ್ 25 (ಕ.ವಾ.): 2025-26ನೇ ಸಾಲಿನಲ್ಲಿ ಉದ್ಯೋಗಿನಿ ಚೇತನ, ಧನಶ್ರೀ ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಗಳಿಗೆ ಕರ್ನಾಟಕ ರಾಜ್ಯಮಹಿಳಾ ಅಭಿವೃದ್ಧಿ ನಿಗಮದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಗೆ ಅರ್ಹರಿರುವ ಮಹಿಳಾ ಅಭ್ಯರ್ಥಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಡಿಸೆಂಬರ್ 15ರೊಳಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರಿಗೆ, ಉದ್ಯೋಗಿನಿ ಯೋಜನೆಯಡಿ ಸಹಾಯಧನ ಮತ್ತು ಬ್ಯಾಂಕಿನ ಮುಖಾಂತರ ಸಾಲ ಒದಗಿಸಿ ಸ್ವಯಂ ಉದ್ಯೋಗಿಗಳನ್ನಾಗಿಸುವುದು ಮಹಿಳಾ ಅಭಿವೃದ್ಧಿ ನಿಗಮದ ಉದ್ದೇಶವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *