ರಾಯಚೂರು ನವೆಂಬರ್ 25 (ಕರ್ನಾಟಕ ವಾರ್ತೆ): ರಾಯಚೂರು ನ್ಯಾಯವಾದಿಗಳ ಸಂಘ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮವು ನಗರದ ಶ್ರೀ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ನವೆಂಬರ್ 26ರಂದು ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಶಿ. ಬಾಗಡೆ ಅವರು ಉದ್ಘಾಟಿಸುವರು. ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ನಿತೀಶ, ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ, ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಗೌರವಾನ್ವಿತ ಹಿರಿಯ ಶ್ರೇಣಿ ದಿವಾನಿ ನ್ಯಾಯಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧೂ ರಘು ಹೆಚ್.ಎಸ್., ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ನಿರ್ದೇಶಕರಾದ ಕಾಳಪ್ಪ ಬಡಿಗೇರ, ರಾಯಚೂರು ಜಿಲ್ಲಾ ಸರಕಾರಿ ವಕೀಲರಾದ ರಾಮನಗೌಡ ಮರ್ಚೆಟ್ಟಾಳ್ ಅವರು ಉಪಸ್ಥಿತರಿರುವರು.
ಅಸ್ಸಾಂನ ಗೌಹಾಟಿಯ ನ್ಯಾಷನಲ್ ಕಾನೂನು ಶಾಲೆಯ ನಿವೃತ್ತ ಉಪಕುಲಪತಿಗಳಾದ ಪ್ರೊ.ಜೆ.ಎಸ್.ಪಾಟೀಲ್ ಅವರು ಮುಖ್ಯ ಭಾಷಣ ಮಾಡುವರು. ವಕೀಲರು ಹಾಗೂ ನ್ಯಾಯವಾಧಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಪ್ಪ ಭಂಡಾರಿ ಹಾಗೂ ನ್ಯಾಯವಾಧಿಗಳ ಸಂಘದ ಇನ್ನೀತರ ಪದಾಧಿಕಾರಗಳು, ಹಿರಿಯ ಸಮಿತಿಯ, ಕಾರ್ಯಕಾರಣಿ ಸಮಿತಿಯ ಸದಸ್ಯರು ಹಾಗೂ ನ್ಯಾಯವಾಧಿ ಬಂಧುಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
