ಕಳೆದ ಹಲವಾರು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆಯೇ ಹರಿದಾಡುತ್ತಿದ್ದು, ಇಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯೇ ಮುಂದುವರಿಯಲಿದೆ.

ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲೂ ಕಳೆದ ಕೆಲವು ದಿನಗಳಿಂದ ಒಣಹವೆಯೇ ಇರಲಿದೆ.

Leave a Reply

Your email address will not be published. Required fields are marked *