ರಾಯಚೂರು (ಕರ್ನಾಟಕ ವಾರ್ತೆ): ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಅವರ ಅಧ್ಯಕ್ಷತೆಯಲ್ಲಿ ಫೆ.24ರ ಬೆಳಿಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಧಿಕಾರಿಗಳ ಸಮನ್ವಯದೊಂದಿಗೆ ನಿಗಮದ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಭೋವಿ ಸಮಾಜದ ಎಲ್ಲಾ ಮುಖಂಡರು ಮತ್ತು ಸಾರ್ವಜನಿಕರು ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ಬೋವಿ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅಂದು ಸಭೆಗೂ ಮುನ್ನು ಬೆಳಿಗ್ಗೆ 10.30 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ. ನಂತರ ಭೋವಿ ಸಮುದಾಯದ ಮುಖಂಡರುಗಳೊಂದಿಗೆ ಸಭೆಯನ್ನು ಏರ್ಪಡಿಸಲಾಗಿದೆ.
ಸಂಜೆ 4 ಗಂಟೆಗೆ ರಾಮನಗರ ಕ್ಯಾಂಪ್ ಹಾಗೂ ಪಂಚಮುಖಿ ಗಾಣದಾಳ ಗ್ರಾಮದಲ್ಲಿನ ಭೋವಿ ಕಾಲೋನಿಗಳಲ್ಲಿ ಭೇಟಿ ನೀಡಿ ಸಮಾಜದ ಕುಂದುಕೊರತೆಗಳ ಹಾಗೂ ನಿಗಮದ ಸೌಲಭ್ಯಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *