ರಾಯಚೂರು (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ ವ್ಯಾಪಾರಿಗಳು ಮತ್ತು ಸ್ವಯಂ ಉದ್ಯೋಗಿ ವ್ಯಕ್ತಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್-ವ್ಯಾಪಾರಿಗಳು) ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೊಂದಾಯಿಸಲು ದಿನಾಂಕ: 15-01-2026 ರಿಂದ 15-03-2026ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದೆ. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ. ರಿಂದ 200ರೂ.ವರೆಗೆ ವಂತಿಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ 3000ರೂ. ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.
ಈ ಯೋಜನೆಯಡಿ ನರೇಗಾಕಾರ್ಮಿಕರು, ಎಸ್‌ಹೆಚ್‌ಜಿ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು, ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಚೇರಿಗಳು, ಎಲ್.ಐ.ಸಿ.ಯ ಶಾಖಾ ಕಚೇರಿಗಳು, ಇಪಿಎಫ್‌ಒ ಮತ್ತು ಇಎಸ್‌ಐಸಿ ಕಚೇರಿ ಹಾಗೂ ಕಾರ್ಮಿಕ ಸಹಾಯವಾಣಿ 155214, ಟೋಲ್ ಫ್ರಿಕಾಲ್ 1800-267-6888ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *