ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಧುಗಿರಿ ಮತ್ತು ಇಂಡಿ ನಬಾರ್ಡ್ ಸಹಯೋಗದೊಂದಿಗೆ ಹಾಗೂ ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರಿನಲ್ಲಿ ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ ಅನುದಾನದಡಿ ನೂತನ ಜಿಟಿಟಿಸಿ ಗಳನ್ನು ಸ್ಥಾಪಿಸುವ ಸಂಬಂಧಿಸಿದ ಸಭೆಯಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ ಯವರು ಭಾಗವಹಿಸಿ ಸಮಾಲೋಚನೆ ನಡೆಸಿದರು.
ಈ ವೇಳೆ ಸಚಿವರಾದ ಡಾ||ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
