ಮಾನ್ವಿ : ರಾಜ್ಯದ ಲಕ್ಷಾಂತರ ವಿದ್ಯಾವಂತ ನಿರುದ್ಯೋಗಿ ಯುವಕರ ಭವಿಷ್ಯವನ್ನು ಗಮನದಲ್ಲಿಟ್ಟು ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿ ಮತ್ತು ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆದ್ಯತೆ ನೀಡಬೇಕು ಎಂದು ದಲಿತ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಜಾವೀದ್ ಖಾನ್ ಹೇಳಿದರು.
ಅವರಿಂದ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಪಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಯುವಕರು ಸರ್ಕಾರಿ ಉದ್ಯೋಗಕ್ಕಾಗಿ ಸಿದ್ಧತೆ ಮಾಡಿಕೊಂಡು ಪರೀಕ್ಷೆಗಳಿಗೆ ಹಾಜರಾಗುತ್ತಿದ್ದರೂ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಹಾಗೂ ಸಮಯಬದ್ಧವಾಗಿ ಪೂರ್ಣಗೊಳಿಸಿ ಯುವಕರಿಗೆ ನ್ಯಾಯಯುತ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.
ರಾಜ್ಯದ ಶಿಕ್ಷಣ, ಆರೋಗ್ಯ, ಪೊಲೀಸ್, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿಯಾಗಿ ಉಳಿದಿದ್ದು, ಇದರಿಂದ ಸಾರ್ವಜನಿಕ ಸೇವೆಗಳ ಮೇಲೆ ಪರಿಣಾಮ ಬೀರುತ್ತಿದೆ. ಇದೇ ಹಿನ್ನೆಲೆದಲ್ಲಿ ರಾಜ್ಯ ಬಜೆಟ್‌ನಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವುದರ ಜೊತೆಗೆ ಹೊಸ ಹುದ್ದೆಗಳನ್ನು ಸೃಷ್ಟಿಸಿ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ದಲಿತ ಸೇನೆ ಜಿಲ್ಲಾಧ್ಯಕ್ಷರಾದ ಮಾರುತಿ ಚಿಕ್ಕಸುಗೂರು, ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ಜಯಶ್ರೀ, ಕರವೇ ಅಧ್ಯಕ್ಷರಾದ ಸುರೇಶ ಬಾಬು ಸೇರಿದಂತೆ ಇನ್ನಿತರ ರೈತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *