ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹೆಚ್. ಶಿವರಾಮೇಗೌಡ ಬಣ ತಾಲೂಕು ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಉಪ ತಹಸೀಲ್ದಾರ್ ವಿನಾಯಕರಾವ್ ಅವರ ಮೂಲಕ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ನರಸಿಂಹ ಅವರು, ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಗತ್ಯವಿರುವ ಕಾಯಂ ಸ್ತ್ರೀರೋಗ ತಜ್ಞರು, ಸ್ಕ್ಯಾನಿಂಗ್ ತಜ್ಞರು, ಮಕ್ಕಳ ತಜ್ಞರು ಹಾಗೂ ಅರವಳಿಕೆ ತಜ್ಞರನ್ನು ತಕ್ಷಣ ನೇಮಕ ಮಾಡುವಂತೆ ಒತ್ತಾಯಿಸಿದರು.
ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ಮಹಿಳೆಯರು ಹಾಗೂ ಮಕ್ಕಳು ಸಮರ್ಪಕ ಚಿಕಿತ್ಸೆ ಪಡೆಯಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಜ್ಞರನ್ನು ಕೂಡಲೇ ನೇಮಕ ಮಾಡಿ ಉತ್ತಮ ಆರೋಗ್ಯ ಸೇವೆ ಒದಗಿಸುವಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ದೀಪಕ್ ಯಾದವ್, ರವಿಕುಮಾರ ಮದ್ಲಾಪೂರ್, ತಾಯಪ್ಪ, ಅಂಜಿ ಯಾದವ್, ಆನಿಲ್ ಕುಮಾರ, ಹರೀಶ್ ಕಾತರಕಿ, ಶಾಂತಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

