ರಾಯಚೂರು ಫೆಬ್ರವರಿ 23 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 1ರಂದು ರೇಣುಕಾಚಾರ್ಯ ಜಯಂತಿ ಹಾಗೂ ಮಾರ್ಚ್ 3ರಂದು ಯೋಗಿನಾರಾಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿ ನಡೆಯಲಿವೆ.
ಈ ಜಯಂತಿಗಳ ಅಂಗವಾಗಿ ಫೆ.24ರ ಬೆಳಿಗ್ಗೆ 11 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಮಾಜದ ಮುಖಂಡರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


