ರಾಯಚೂರು ಫೆಬ್ರವರಿ 23 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಯುವ ಸಂಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವ-2026ರ ಕಾರ್ಯಕ್ರಮವನ್ನು ಫೆ.24ರ ಬೆಳಿಗ್ಗೆ 8ಗಂಟೆಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಅವರು ಉದ್ಘಾಟನೆ ನೆರವೇರಿಸುವರು.
ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶಕುಮಾರ ಸಿಂಗ್‌ಅವರು ಘನ ಉಪಸ್ಥಿತಿ ವಹಿಸುವರು.
ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಹನುಮಂತಪ್ಪ ಅವರು ಉಪಸ್ಥಿತಿ ವಹಿಸುವರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಕಾರ್ಯಕ್ರಮದಲ್ಲಿ ಬಾಗಿಯಾಗಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣಬಸವರಾಜ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಡಾ.ಟಿ.ರೋಣಿ, ಜಿಲ್ಲಾ ಪಂಚಾಯತ್ ಲೆಕ್ಕಾಧಿಕಾರಿ ವಿಜಯಶಂಕರ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ ಶಾವಂತಗೇರಿ ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ ಎಂದು ಜಿ.ಪಂ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *