ರಾಯಚೂರು ಫೆಬ್ರವರಿ 23 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ ಡಾ.ಬಾಬು ಜಗಜೀವನ ರಾಂ ಅವರ 198ನೇ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2026-27ನೇ ಸಾಲಿನ ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವರಾಂ ಇವರ ಸ್ಮರಣಾರ್ಥ ಪ್ರಶಸ್ತಿಗೆ ಯಾವುದೇ ವ್ಯಕ್ತಿ ಒಂದು ಪ್ರಶಸ್ತಿಗೆ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿದಾರರ ವಯಸ್ಸು ಕನಿಷ್ಠ 35 ವರ್ಷಗಳಾಗಿರತಕ್ಕದ್ದು. ಯಾವುದೇ ವ್ಯಕ್ತಿಯನ್ನು ಒಂದು ಪ್ರಶಸ್ತಿಗೆ ಮಾತ್ರ ಆಯ್ಕೆ ಮಾಡತಕ್ಕದ್ದು. ಪ್ರಶಸ್ತಿಗೆ ಯಾವುದೇ ಜನಾಂಗದ ವ್ಯಕ್ತಿ ಅರ್ಜಿ ಸಲ್ಲಿಸಬಹುದು. ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರಶಸ್ತಿಯನ್ನು ಗರಿಷ್ಠ 10 ಜನರಿಗೆ ಮತ್ತು ಡಾ.ಬಾಬು ಜಗಜೀವನರಾಂ ಪ್ರಶಸ್ತಿಯನ್ನು ಗರಿಷ್ಠ 10 ಜನರಿಗೆ ನೀಡಲಾಗುವುದು. ಅಂತಹ ಪ್ರಶಸ್ತಿಗಳನ್ನು ಕ್ರಮವಾಗಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಇವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು. ಪ್ರಶಸ್ತಿಯು ಪ್ರಶಂಸಾ ಪತ್ರ, ಶಾಲು, ಗಂಧದಹಾರ, ಫಲಪುಷ್ಟ ಹಾಗೂ 25,000 ರೂ. ಮೊತ್ತದ ನಗದು ಒಳಗೊಂಡಿರುತ್ತದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರತಕ್ಕದ್ದಲ್ಲ. ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇವರಿಗೆ ಸಲ್ಲಿಸಬೇಕು. ಅಂತಹ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಅವರ ಹಂತದಲ್ಲಿ ಪರಿಶೀಲಿಸಿ ಸೂಕ್ತ ವ್ಯಕ್ತಿಗಳನ್ನು ಗುರುತಿಸಿ ಜಿಲ್ಲೆಗೆ ಒಬ್ಬರಂತೆ (ಒಂದು ವೇಳೆ ಒಂದೇ ಜಿಲ್ಲೆಯಲ್ಲಿ ಒಂದಕ್ಕಿಂತ ಹೆಚ್ಚು ಅರ್ಹ ವ್ಯಕ್ತಿಗಳು ಇದ್ದಲ್ಲಿ ವಯಸ್ಸಿನ ಆಧಾರದ ಮೇಲೆ) ಶಿಫಾರಸ್ಸ ಮಾಡಿ ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರುರವರಲ್ಲಿ ಸಲ್ಲಿಸುವುದು. ರಾಜ್ಯ ಮಟ್ಟದಲ್ಲಿ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿಗಳು ನೇರವಾಗಿ ಅರ್ಜಿಗಳನ್ನು ಮಾನ್ಯ ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರುರವರಲ್ಲಿ ಸಲ್ಲಿಸಬಹುದು. ಜಿಲ್ಲಾಧಿಕಾರಿಗಳಿಂದ ಶಿಫಾರಸ್ಸಾದಂತಹ ಅರ್ಜಿಗಳು ಹಾಗೂ ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಇವರಿಗೆ ನೇರವಾಗಿ ಸಲ್ಲಿಸಲ್ಪಟ್ಟ ಎಲ್ಲಾ ಅರ್ಜಿಗಳನ್ನು ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರುರವರರು ಪರಿಶೀಲಿಸಿ ಪ್ರಶಸ್ತಿಗೆ ಅರ್ಹರೆಂದು ಕಂಡುಬರುವ ವ್ಯಕ್ತಿಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು.
ಆಸಕ್ತರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ರಾಯಚೂರು ಕಚೇರಿಯಲ್ಲಿ ಮತ್ತು ಅಯಾ ತಾಲೂಕಿನ ಸಹಾಯಕ ನಿರ್ದೆಶಕರು ಗ್ರೇಡ್-1 & 2, ಸಮಾಜ ಕಲ್ಯಾಣ ಇಲಾಖೆ ರಾಯಚೂರು, ಮಾನ್ವಿ, ಸಿಂಧನೂರು, ಲಿಂಗಸುಗೂರು ಮತ್ತು ದೇವದುರ್ಗ ಅವರ ಕಚೇರಿಗಳಲ್ಲಿ ಪಡೆದು ಮಾರ್ಚ್ 05ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *