ತಾಳಿಕೋಟಿ :ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮಾಧ್ಯಮದ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಷಯಾಧಾರಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಹಿನ್ನಲೆಯಲ್ಲಿ ಸಂಸ್ಥೆ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ಫೆಬ್ರವರಿ 21ರಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ತಾಲೂಕಾ ಘಟಕ ತಾಳಿಕೋಟಿ. ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್. ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಮುದ್ದೇಬಿಹಾಳ ತಾಲೂಕ ಮಟ್ಟದ ವಿಷಯಧಾರಿತ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುಮಾರು 39 ಪ್ರೌಢ ಶಾಲೆಗಳು ಭಾಗವಹಿಸಿದ್ದವು, ಸರ್ವಜ್ಞ ವಿದ್ಯಾಪೀಠ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಭಿನಂದನೆ: ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಬ. ಮಂಗಳೂರ,ಮುಖ್ಯಗುರು ಗಳಾದ ಸಂತೋಷ ಪವಾರ, ಹಿರೂರ ಸರ್ಕಾರಿ ಶಾಲೆ, ಎಸ್ ಡಿ ಎಮ್ ಸಿ ಅಧ್ಯಕ್ಷ ಸಂಗನಗೌಡ ಅಸ್ಕಿ,ಹಾಗೂ ಸರ್ವ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *