ಸರ್ಕಾರಿ ಶಾಲಾ ಮಕ್ಕಳ ಭೌತಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಅಕ್ಷರ ದಾಸೋಹ ಸಿಬ್ಬಂದಿ ಸೇವೆಯೂ ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ತಾ.ಪಂ ಇಒ ಬಸವರಾಜ ಹಟ್ಟಿ ಹೇಳಿದರು.
ಪಟ್ಟಣದಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಕ್ಷರ ದಾಸೋಹ ನೌಕರರಿಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಿ ಸಿಲಿಂಡರ್ ಬಳಕೆಯ ಬಗ್ಗೆ ಜಾಗೃತರಾಗಿರಬೇಕು.
ವೈಯಕ್ತಿಕ ರಕ್ಷಣೆ ಬಗ್ಗೆ ಜಾಗೃತರಾಗಿರಬೇಕು’ ಎಂದು ತಿಳಿಸಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಸವರಾಜ ಕಟ್ಟಿಮನಿ ಮಾತನಾಡಿ, ‘ಬಿಸಿಯೂಟ ಯೋಜನೆಯಿಂದ ಶಾಲಾ ಮಕ್ಕಳ ಆರೋಗ್ಯ ಪೋಷಣೆ ಮತ್ತು ಶೈಕ್ಷಣಿಕ ಪ್ರಗತಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿದೆ. ಬಿಸಿಯೂಟ ತಯಾರಿಸುವ ಸಿಬ್ಬಂದಿಯ ಸೇವೆ ಕೂಡಾ ಮಕ್ಕಳ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದರು.

ತರಬೇತಿಯಲ್ಲಿ ಭಾಗವಹಿಸಿದ್ದ ತಾಲ್ಲೂಕಿನ ಎಲ್ಲಾ ಬಿಸಿಊಟ ನೌಕರರಿಗೆ ಅಡುಗೆ ತಯಾರಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸ್ವಚ್ಛತೆ ತಾಜಾ ತರಕಾರಿಗಳ ಬಳಕೆಯ ಬಗ್ಗೆ ಅಧಿಕಾರಿಗಳು ತರಬೇತಿ ನೀಡಿದರು.

ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಅಡುಗೆ ಸಿಬ್ಬಂದಿಗಳಿಗೆ ಅಗ್ನಿಶಾಮಕ ದಳದ ಬೆಂಕಿ ನಂದಿಸುವ ಪ್ರಾತ್ಯಕ್ಷಿತೆಯ ಬಗ್ಗೆ ಮಾಹಿತಿ ನೀಡಿದರು.

ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ ಪೂಜಾರಿ, ಪಿಡಿಒ ವೆಂಕೋಬ ನಾಯಕ, ಸಿಆರ್‌ಪಿ ಬಸವರಾಜ ನಾಯಕ ಸಾತಲ್, ಮುಖ್ಯಶಿಕ್ಷಕ ಹುಸೇನ್‌ ಬಾಷಾ , ಆರೋಗ್ಯ ಇಲಾಖೆಯ ಸಿಬ್ಬಂದಿ ಶಿವಪ್ಪ ಭೂಮನಗುಂಡ, ನಾಗಲಿಂಗಪ್ಪ, ಸಹಾಯಕ ಅಗ್ನಿಶಾಮಕ ಠಾಣಾ ಅಧಿಕಾರಿಗಳಾದ ಹನುಮೇಶ, ಅಂಜಿನಪ್ಪ, ಮಹೇಶಕುಮಾರ, ಪರಶುರಾಮ,ಅರುಣಕುಮಾರ, ರಮೇಶ ಅಕ್ಕರಕಿ .ಸಿ ಆರ್ ಪಿ ಬಸವರಾಜ, ಬಿಆರ್‌ಪಿ ಶಶಿಧರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *