ಜಾಲಹಳ್ಳಿ : ಗ್ರಾಮ ಪಂಚಾಯಿತಿಗೆ 2025-26ನೇ ಸಾಲಿನ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಸೇರಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ವೀರೇಶ್ ಅರಕೇರಿ ಅವರ ನೇತೃತ್ವದಲ್ಲಿ ಇಂದು ದಿನಾಂಕ 23-02-2026 ರಂದು ದೇವದುರ್ಗ ತಾಲೂಕಿನ ಪಂಚಾಯತ್ ಕಾರ್ಯಾಲಯದಲ್ಲಿ ನಿಯೋಗವು ಭೇಟಿ ನೀಡಿ ಮನವಿ ಸಲ್ಲಿಸಿತು.

ಮುಖ್ಯ ಬೇಡಿಕೆಗಳು:

2025-26 ಸಾಲಿನ BOC ಕಾಮಗಾರಿಗಳ ಆನ್‌ಗೋಯಿಂಗ್ ಕ್ಲಿಯರೆನ್ಸ್ ಮಾಡಿಕೊಡುವುದು

2025-26ನೇ ಸಾಲಿನ 15ನೇ ಹಣಕಾಸು ಅನುದಾನ ಬಿಡುಗಡೆ ಮಾಡುವುದು

ಜಾಲಹಳ್ಳಿ ಗ್ರಾಮ ಪಂಚಾಯತಿಗೆ 2025-26ನೇ ಸಾಲಿನಲ್ಲಿ ಸುಮಾರು 8 ಕೋಟಿ 80 ಲಕ್ಷ ರೂಪಾಯಿ ಮಂಜೂರಾಗಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಪಂಚಾಯತಿ ಒಟ್ಟು 9 ವಾರ್ಡ್‌ಗಳನ್ನು ಹೊಂದಿದ್ದು, ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಜನರು ಸದಸ್ಯರ ಮೇಲೆ ಒತ್ತಡ ಹಾಕುತ್ತಿದ್ದಾರೆ.

ಮಾರ್ಚ್ ಅಂತ್ಯದೊಳಗೆ ಕ್ರಿಯಾ ಯೋಜನೆ ಪೂರ್ಣಗೊಳ್ಳಬೇಕಿರುವುದರಿಂದ, ಜಿಲ್ಲಾ ಪಂಚಾಯತಿಯಿಂದ ತುರ್ತುಗತಿಯಲ್ಲಿ ಆನ್‌ಗೋಯಿಂಗ್ ಕ್ಲಿಯರೆನ್ಸ್ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಇದಲ್ಲದೆ, 15ನೇ ಹಣಕಾಸು ಯೋಜನೆಯ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ ಎಂದು ತಿಳಿಸಲಾಗಿದೆ. ಜಾಲಹಳ್ಳಿ ದೊಡ್ಡ ಗ್ರಾಮ ಪಂಚಾಯತಿಯಾಗಿದ್ದು ಸುಮಾರು 20,000 ಜನಸಂಖ್ಯೆ ಹೊಂದಿದೆ. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಮೂಲಭೂತ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಪಂಚಾಯತಿಯ ನಿಧಿ-1 ಹಾಗೂ ನಿಧಿ-2 ಅನುದಾನದಿಂದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದು ಕಷ್ಟವಾಗಿದೆ ಎಂದು ತಿಳಿಸಲಾಗಿದೆ.

ಅನುದಾನ ಬಿಡುಗಡೆಗೆ ನಿರ್ಲಕ್ಷ್ಯ ವಹಿಸಿದಲ್ಲಿ, ಮುಂದಿನ ದಿನಗಳಲ್ಲಿ ಜಾಲಹಳ್ಳಿಯ ಎಲ್ಲಾ ಸಮಸ್ಯೆಗಳಿಗೆ ತಾಲೂಕು ಪಂಚಾಯತ್ ಅಧಿಕಾರಿಗಳೇ ಜವಾಬ್ದಾರರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ. ಅಗತ್ಯವಿದ್ದಲ್ಲಿ ಗ್ರಾಮಸ್ಥರೊಂದಿಗೆ ತಾಲೂಕು ಪಂಚಾಯತ್ ಕಚೇರಿ ಮುಂದೆ ಗೌರವಯುತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಈ ಮನವಿ ಸಲ್ಲಿಸುವ ಸಂದರ್ಭದಲ್ಲಿ:

ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವೀರೇಶ್ ಅರಕೇರಿ

ಸದಸ್ಯರಾದ ಅಬ್ದುಲ್ ರೆಹಮಾನ್ ಖುರೇಷಿ

ಬಸವರಾಜ್ ಗೋಪಾಳಪುರ್

ಸಲಬಣ್ಣ ಹಂಪರಗುಂದಿ

ಗ್ರಾಮ ಮುಖಂಡರಾದ ವೆಂಕುಬ ತೋಟದ್
ಹಾಜರಿದ್ದರು.

Leave a Reply

Your email address will not be published. Required fields are marked *