ಮಸ್ಕಿ: ಇತ್ತೀಚಿಗೆ ರಾಯಚೂರು ನಗರದ ಮಹಾತ್ಮ ಗಾಂಧಿ ಜಿಲ್ಲಾಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಸ್ಕಿ ಪಟ್ಟಣದ ಎನ್ ಎಂ ಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ತಂದೆ ನಾಗರಾಜ ಜೋಗಿನ್ 9ನೇ ತರಗತಿ ವಿದ್ಯಾರ್ಥಿನಿ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ100ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
ವಿಜೇತ ಕ್ರೀಡಾಪಟುವಿಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದುರುಗಪ್ಪ , ಮರಿಬಸಪ್ಪ ಅಭಿನಂದಿಸಿದ್ದಾರೆ. ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿವಿಜೇತಳಾದ ಕ್ರೀಡಾಪಟುವನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು ಶ್ರೀಮತಿ ವಿದ್ಯಾವತಿ ವನಕಿ ಹಾಗೂ ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
