ಮಸ್ಕಿ: ತಾಲೂಕಾಡಳಿತವತಿಯಿಂದ ವಿವಿಧ ಮಹನೀಯರ ಜಯಂತಿಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಣೆ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ಮಂಜುನಾಥ ಭೋಗವತಿ ರವರು ಹೇಳಿದರು.
ಪಟ್ಟಣದ ಬಸವೇಶ್ವರ ನಗರದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾರ್ಚ ೦೧ ರಂದು ರೇಣುಕಾಚಾರ್ಯ ಜಯಂತಿ, ಹಾಗೂ ಮಾರ್ಚ ೦೩ ರಮದು ಯೋಗಿ ನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿಯನ್ನು ತಾಲೂಕಾಡಳಿತದಿಂದ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.


