ಮಸ್ಕಿ: ಸಂವಿಧಾನ ದಿನದ ನಿಮಿತ್ತ ಬುಧವಾರ ತಾಲ್ಲೂಕು ಆಡಳಿತದಿಂದ ಸಂವಿಧಾನ ದಿನ ಹಾಗೂ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಹಳೆಯ ಬಸ್ ನಿಲ್ದಾಣದಲ್ಲಿ ಡಾ. ಅಂಬೇಡ್ಕರ್ ಪ್ರತಿಮೆಗೆ ತಹಶೀಲ್ದಾರ್ ಮಂಜುನಾಥ ಬೋಗಾವತಿ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಸೇರಿದಂತೆ ತಾಲ್ಲೂಕಿನ ಅಧಿಕಾರಿಗಳು, ಸಂಘಟನೆಗಳ ಮುಖಂಡರು ಮಾಲಾರ್ಪಣೆ ಮಾಡಿದರು. ತಹಶೀಲ್ದಾರ್ ಮಂಜುನಾಥ ಬೋಗಾವತಿ ಪ್ರತಿಜ್ಞಾವಿಧಿ ಬೋಧಿಸಿದರು.
ಶಾಸಕರ ಪುತ್ರ ಆರ್. ಸತೀಶ ತುರ್ವಿಹಾಳ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಮೈಬುಸಾಬ ಮುದ್ದಾಪೂರ, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಸಿಪಿಐ ಬಾಲಚಂದ್ರ ಡಿ. ಲಕ್ಕಂ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಂಪಾಪತಿ ಹೂಗಾರ, ದಲಿತ ಸಾಹಿತಿ ಸಿ. ದಾನಪ್ಪ. ದೊಡ್ಡಪ್ಪ ಮುರಾರಿ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಮುಖ ಬೀದಿಗಳಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರ ಹಾಗೂ ಸಂವಿಧಾನದ ಪೀಠಿಕೆಯ ಮೆರವಣಿಗೆ ನಡೆಯಿತು. ಅಧಿಕಾರಿಗಳು, ಶಾಲಾ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಮಸ್ಕಿ ಪಟ್ಟಣದ ಗಾಂಧಿ ನಗರದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಮಾಲಾರ್ಪಣೆ ಮಾಡಿದರು.

