ಮಸ್ಕಿ: ಮಸ್ಕಿ ಪಟ್ಟಣದಲ್ಲಿ ಒಂದು ಕೋಟಿ ಎಂಬತ್ತು ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರುವಿಹಾಳ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಸ್ಕಿ ಪಟ್ಟಣವು ತಾಲೂಕು ಕೇಂದ್ರವಾಗಿರುವುದರಿಂದ ಇಲ್ಲಿನ ಪ್ರತಿನಿತ್ಯ ಕ್ರೀಡಾಭಿಮಾನಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣ ನಿರ್ಮಿಸುವುದಕ್ಕಾಗಿ ಈಗಾಗಲೇ ಕಾಮಗಾರಿ ಆರಂಭವಾಗಿದ್ದು ಗುತ್ತಿಗೆದಾರರು ಸಹ ಸೂಕ್ತ ಗುಣಮಟ್ಟದಿಂದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಮಾಡಿ ಮುಗಿಸಿ ಇದರಿಂದ ಜನರಿಗೆ ಅನುಕೂಲವಾಗಲಿದೆ ಅಲ್ಲದೆ ಮುಂಬರುವ ದಿನಗಳಲ್ಲಿ ಪಟ್ಟಣದ ಅಭಿವೃದ್ಧಿಗಾಗಿ ಇನ್ನಷ್ಟು ಯೋಜನೆಗಳನ್ನು ರೂಪಿಸಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತವಾದ ಉದ್ಯಾನವನವನ್ನು ಸಹ ನಿರ್ಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನಿರುಪಾದೆಪ್ಪ ವಕೀಲರು ಸೇರಿದಂತೆ ಕ್ಯಾಶ್ಯೂ ಟೆಕ್ ಇಲಾಖೆಯ ಇಂಜಿನಿಯರ್ ತಿಮ್ಮಣ್ಣ ಹಾಗೂ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *