ರಾಯಚೂರು ಫೆಬ್ರವರಿ 24 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಮತ್ತು ಪಿ.ಎಂ ಅಭೀಮ್ ಯೋಜನೆಯಡಿಯಲ್ಲಿ 2025-26 ನೇ ಸಾಲಿಗೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : ಪಿ.ಎಂ. ಅಭೀಮ್ ಅಡಿಯಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು-18 ಹುದ್ದೆಗಳು, ಎನ್.ಯು.ಹೆಚ್.ಎಂ. ಕಾರ್ಯಕ್ರಮದಡಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು-01 ಹುದ್ದೆ ಹಾಗೂ ಎನ್.ಯು.ಹೆಚ್.ಎಂ. ಕಾರ್ಯಕ್ರಮದಡಿ ಆರೋಗ್ಯ ನಿರೀಕ್ಷಣಾಧಿಕಾಧಿಕಾರಿಗಳು-01 ಹುದ್ದೆಗೆ ಗುತ್ತಿಗೆ ಆಧಾರದ ನೇಮಕಾತಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿಯಮಾನುಸಾರ, ರೋಷ್ಟರ್ ಕಮ್ ಮೇರಿಟ್ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು, ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಮಾರ್ಚ್ 11ರೊಳಗಾಗಿ ವೆಬ್‌ಸೈಟ್: https://raichur.nic.in ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು ಆನ್‌ಲೈನ್ ಹೊರತು ಪಡಿಸಿ ಇತರೆ ಯಾವುದೇ ಮೂಲಗಳಿಂದ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಗುತ್ತಿಗೆ ಆಧಾರದ ನೇಮಕಾತಿಯು ಎನ್.ಹೆಚ್.ಎಂ. ನಿಯಮಾವಳಿಯ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಯೋಜನಾ ಅಭಿವೃದ್ದಿ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯ ರಾಯಚೂರು ಕಚೇರಿ ಅವಧಿಯಲ್ಲಿ ಮಾಹಿತಿ ಪಡೆಯಬಹುದು ಅಥವಾ ಮೊಬೈಲ್ ಸಂಖ್ಯೆ : 9449843121, 9844193931ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಜಿಲ್ಲಾ ಯೋಜನಾ ಅಭಿವೃದ್ದಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *