ರಾಯಚೂರು ಫೆಬ್ರವರಿ 24 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯ 33/11 ಕೆವಿ ಇಡಪನೂರು ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಫೆ.26ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 04ಗಂಟೆವರೆಗೆ ಇಡಪನೂರು ಉಪ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
