ಮಸ್ಕಿ: ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾರಾಯಣನಗರ ಕ್ಯಾಂಪಿನ ಬಳಿ ಇರುವ ಕುಡಿಯುವ ನೀರಿನ ಕೆರೆಗೆ ಮಂಗಳವಾರ ತಹಸಿಲ್ದಾರ್ ಮಂಜುನಾಥ ಭೋಗಾವತಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು ಈಗಾಗಲೇ ಬೇಸಿಗೆ ಕಾಲ ಆರಂಭವಾಗುತ್ತಿದ್ದು ಮುಂಬರುವ ದಿನಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು ಹಾಗೂ ಕೆರೆಯ ಬಳಿಗೆ ಜನ ಜಾನುವಾರುಗಳು ಹೋಗದಂತೆ ಮುಂಜಾಗ್ರತ ಕ್ರಮಗಳನ್ನು ತಾಲೂಕಿನಲ್ಲಿರುವ ಎಲ್ಲಾ ಕೆರೆಗಳಿಗೂ ಸಹ ಭೇಟಿ ನೀಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಇಲ್ಲಿನ ಬಳಗಾನೂರು ಪಟ್ಟಣ ವ್ಯಾಪ್ತಿಯ ನಾರಾಯಣ ನಗರ ಕ್ಯಾಂಪಿನ ಲ್ಲಿರುವ ಕುಡಿಯುವ ನೀರಿನ ಕೆರೆಯ ಸುತ್ತ ಮುತ್ತ ಜನವಾರುಗಳು ಬರೆದಂತೆ ಸುತ್ತಲೂ ತಂತಿ ಬೇಲಿ ಹಾಕಲು ಬಳಗಾನೂರು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಇನ್ನಿತರ ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *