ನಾಡಿನ ಹಿರಿಯ ಐಎಎಸ್ ಅಧಿಕಾರಿಗಳಾದ ಶ್ರೀ ಮಹಾಂತೇಶ ಬೀಳಗಿ ಅವರ ನಿಧನ ವಾರ್ತೆ ಕೇಳಿ ದುಃಖಿತನಾಗಿದ್ದೇನೆ .
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಮಹಂತೇಶ್ ಬೀಳಗಿ ಅವರು ನಾಡಿನ ಯುವಜನತೆಗೆ ಸ್ಫೂರ್ತಿಯಾಗಿದ್ದರು. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರ ಪಾಲಿಗೆ ದಾರಿದೀಪವಾಗಿದ್ದರು.
ಇವರ ನಿಧನ ನಾಡಿಗೆ ತುಂಬಲಾರದ ನಷ್ಟ ಉಂಟುಮಾಡಿದೆ. ಮೃತರಿಗೆ ಸದ್ಗತಿಯನ್ನು, ಕುಟುಂಬದವರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

