ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿ ಚಂದ್ರಬಂಡ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಮಾರ್ಚ್ 2ರ ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 03ಗಂಟೆವರೆಗೆ ಚಂದ್ರಬಂಡ ವಿದ್ಯುತ್ ಉಪ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
