ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಯರಗೇರಾ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಫೆ.26ರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 04 ಗಂಟೆವರೆಗೆ ಯರಗೇರಾ ವಿದ್ಯುತ್ ಉಪ ಕೇಂದ್ರದ ಯರಗೇರಾ, ಎಲ್.ಕೆ.ದೊಡ್ಡಿ, ಗುಂಜಳ್ಳಿ, ಜಂಬಲದಿನ್ನಿ, ವೈ.ಮಲ್ಲಾಪುರ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
