ಮಸ್ಕಿ : ಸುಂಕನೂರು, ಚಿಕ್ಕ ಕಡಬುರ್ ಹಾಗೂ ಕ್ಯಾತ್ನಟ್ಟಿ ಗ್ರಾಮಗಳಲ್ಲಿ ನಡೆದ ಸಿ.ಸಿ ರಸ್ತೆ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮವು ಭಕ್ತಿ, ಉತ್ಸಾಹ ಮತ್ತು ಜನಸ್ಪಂದನೆಯ ನಡುವೆ ಯಶಸ್ವಿಯಾಗಿ ನೆರವೇರಿತು. ಮಸ್ಕಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮದ್ಯೋಗ ನಿಗಮ ಅಧ್ಯಕ್ಷ ಆರ್. ಬಸನಗೌಡ ತುರುವಿಹಾಳ್ ಅವರು ಪೂಜೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಗುಣಮಟ್ಟದ ಮೂಲಸೌಕರ್ಯ ಅವಶ್ಯಕ ಎಂದು ತಿಳಿಸಿ, ರಸ್ತೆ ಅಭಿವೃದ್ಧಿಯಿಂದ ವಿದ್ಯಾರ್ಥಿಗಳು, ರೈತರು, ಮಹಿಳೆಯರು ಹಾಗೂ ವ್ಯಾಪಾರಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು. ಉತ್ತಮ ರಸ್ತೆ ಸಂಪರ್ಕದಿಂದ ಗ್ರಾಮಗಳ ಆರ್ಥಿಕ ಚಟುವಟಿಕೆಗಳಿಗೆ ವೇಗ ಸಿಗಲಿದ್ದು, ದಿನನಿತ್ಯದ ಸಂಚಾರ ಸುಗಮವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರು, ಯುವ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮಗಳ ಉಜ್ವಲ ಭವಿಷ್ಯಕ್ಕಾಗಿ ಎಲ್ಲರ ಸಹಕಾರ ಅಗತ್ಯವೆಂದು ತಿಳಿಸಿದರು.
ಜನಸೇವೆಯ ಸಂಕಲ್ಪದೊಂದಿಗೆ ಗ್ರಾಮಾಭಿವೃದ್ಧಿಯತ್ತ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ

