ಸಿಂಧನೂರು: ಫೆ 26 ನಗರದ ಶಾಸಕರ ಕಾರ್ಯಾಲಯದಲ್ಲಿ ಗುರುವಾರದಂದು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ಯೋಜನೆಯಡಿ ತಾಲೂಕಿನ ವಿವಿಧ ಗ್ರಾಮಗಳ ಆಯ್ದ 22 ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಸಿಂಧನೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬುಗೌಡ ಬಾದರ್ಲಿ ಅವರು ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಹಸ್ತಾಂತರಿಸಿ ಮಾತನಾಡಿ, “ಸರ್ಕಾರದ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು,” ಎಂದು ಆಶಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಮಂಜುನಾಥ್ ಜಿಲ್ಲಾ ವ್ಯವಸ್ಥಾಪಕರು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮ,ಶಿವಕುಮಾರ ತಾಲೂಕು ಅಭಿವೃದ್ಧಿ ಅಧಿಕಾರಿಗಳು, ಖಾಜಿ ಮಲ್ಲಿಕ್ ವಕೀಲರು ಹಾಗೂ ನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು,ಅನಿಲ್ ಕುಮಾರ್ ವೈ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು,ಶ್ರೀದೇವಿ ಶ್ರೀನಿವಾಸ ಅಧ್ಯಕ್ಷರು ಸ್ತ್ರೀಶಕ್ತಿ ಮಹಿಳಾ ಒಕ್ಕೂಟ,ನಿಂಗಪ್ಪ ಎಂ ಅಧ್ಯಕ್ಷರು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ,ಶಿವನಗೌಡ ಬೆಲೆಕೊಡಲಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ವಿವಿಧ ಗ್ರಾಮಗಳಿಂದ ಬಂದಿದ್ದ ಫಲಾನುಭವಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *