ರಾಯಚೂರು ಫೆಬ್ರವರಿ 26 (ಕರ್ನಾಟಕ ವಾರ್ತೆ): ಇಲ್ಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ (10+1) ಕುರಿ/ಮೇಕೆ ಘಟಕ ಯೋಜನೆಯನ್ನು ಅನುಷ್ಠಾನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಗೆ 45 ಗುರಿಗಳು (ಪರಿಶಿಷ್ಠ ಜಾತಿ-23, ಪರಿಶಿಷ್ಠ ಪಂಗಡ-22) ಸರ್ಕಾರದ ಮಾರ್ಗಸೂಚಿಗಳಂತೆ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಫಲಾನುಭವಿಗಳ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು. ಹಾಗೂ ಈ ಯೋಜನೆಯ ಗ್ರಾಮೀಣ ಭಾಗದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಮತ್ತು ಪಶು ಸಂಗೋಪನೆಯಲ್ಲಿ ತೋಡಗಿಕೊಂಡ ಆಸಕ್ತ ಮತ್ತು ಅರ್ಹ ಅಭ್ಯಾರ್ಥಿಗಳು, ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರು/ ಮುಖ್ಯ ಪಶುವೈಧ್ಯಾಧಿಕಾರಿಗಳು ಪಶು ಆಸ್ಪತ್ರೆ ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಮಾರ್ಚ್ 11ರೊಳಗಾಗಿ ಅರ್ಜಿಯನ್ನು ದ್ವಿಪ್ರತಿಯಲ್ಲಿ ಅದೇ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು/ ಮುಖ್ಯ ಪಶುವೈಧ್ಯಾಧಿಕಾರಿಗಳು ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ರಾಯಚೂರು ಇವರನ್ನು ಸಂಪರ್ಕಿಸುವಂತೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

