ಮಾನ್ವಿ: ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಸಂಜೀವ ಸುಧಾಕರ್ ಅವರು ಮಾತನಾಡಿ, “ಭಾರತದ ಸಂವಿಧಾನವು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಮ್ಮ ಸಂವಿಧಾನದ ಪಾತ್ರ ಹಿರಿದು. ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು,” ಎಂದು ಕರೆ ನೀಡಿದರು.
ಮುಖ್ಯ ಭಾಷಣಕಾರರಾಗಿ ಮಾತನಾಡಿದ ಶಿಕ್ಷಕಿ ಬಂಡೆಮ್ಮ ಅವರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಶ್ರಮ ಮತ್ತು ತ್ಯಾಗವನ್ನು ಸ್ಮರಿಸಿದರು. ಪ್ರತಿಯೊಬ್ಬ ಪ್ರಜೆಯೂ ತಮ್ಮ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳ ಬಗ್ಗೆಯೂ ಜಾಗೃತಿ ಹೊಂದಿರಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ಕಾರ್ಯಕ್ರಮದ ಅಂಗವಾಗಿ ಸಾಮೂಹಿಕವಾಗಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ರೇಖಾದೇವಿ, ಅಶೋಕ್ ಕುಮಾರ್, ಚನ್ನಬಸವರಾಜ್, ರಜಿನಿ, ಜೈ ಭೀಮ್, ಶೇಕ್ ಹುಸೇನ್, ಅನ್ವರ್ ಹುಸೇನ್, ಶ್ರೀಮತಿ ಕಟ್ಟಿ, ಶರಣಮ್ಮ, ಪ್ರಮೋದ್ ಕುಮಾರ್, ಹಿರೇಮಣಿ, ಶರತ್ ಕುಮಾರ್, ರೇಣುಕಾ, ವಿಶಾಲಾಕ್ಷಿ ಇದ್ದರು

