ರಾಜ್ಯದ ವಿವಿಧೆಡೆ ಹವಾಮಾನದಲ್ಲಿ ಏರುಪೇರಾಗಿದ್ದು, ಕಳೆದ ರಾತ್ರಿ ಧಾರವಾಡ, ಹುಬ್ಬಳ್ಳಿ ಹಾಗೂ ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯ ಪ್ರಕಾರ, ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಹವಾಮಾನ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ
11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಒಟ್ಟು 11 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ,ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ.
ಯಾದಗಿರಿ, ರಾಯಚೂರು ಸೇರಿದಂತೆ ದಕ್ಷಿಣ ಕರ್ನಾಟಕದ ಹಾಸನ, ಕೊಡಗು, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ತುಂತುರು ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ತಿಳಿಸಿದೆ.
ಮಳೆ ಮತ್ತು ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಹಾಗೂ ಸಿಡಿಲಿನ ಅಪಾಯವಿರುವುದರಿಂದ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದೆಂದು ಕೋರಲಾಗಿದೆ.

Leave a Reply

Your email address will not be published. Required fields are marked *