ಸಿಂಧನೂರು : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸುವಂತೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ’ ಫೆ. 24ರಂದು ಧಾರವಾಡದಲ್ಲಿ ನಡೆಸಿದ ಬೃಹತ್ ಪ್ರತಿಭಟನೆ. ಯುವಜನರ ಉದ್ಯೋಗದ ನಿರೀಕ್ಷೆಗಳಿಗೆ ಸ್ಪಂದಿಸದಿರುವ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದಿರುವ ಕನ್ನಡಿಯಾಗಿದೆ. 50 ಸಾವಿರ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಸರ್ಕಾರ ಅಧಿಸೂಚನೆ ಹೊರಡಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳುತ್ತೇವೆ ಎಂದು ‘ಅಕ್ಷಾ’ ಸಂಘಟನೆ ಈಗಾಗಲೇ ತಿಳಿಸಿದ್ದು, ನಾಡಿನ ಎಲ್ಲ ಭಾಗದ ನಿರುದ್ಯೋಗಿ ಯುವಜನರ ಸಂಕಟ ಹಾಗೂ ಹತಾಶೆಯನ್ನು ಗಂಭೀರವಾಗಿ ಪರಿಗಣಿಸಿ ಉದ್ಯೋಗಾಕಾಂಕ್ಷಿಗಳ ಬೇಡಿಕೆಯನ್ನು ಈಡೇರಿಸಬೇಕು ಎಂದು ಈ ಮೂಲಕ ನಮ್ಮ ಸಂಘಟನೆ ಆಗ್ರಹಿಸುತ್ತದೆ.
ಶಾಲಾ ಶಿಕ್ಷಣ ಇಲಾಖೆಯಲ್ಲಿನ 79.694 ಹುದ್ದೆಗಳು ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಒಟ್ಟು 2,84,881 ಹುದ್ದೆಗಳನ್ನು ಸರ್ಕಾರ ತುಂಬಬೇಕಾಗಿದೆ. ಈ ಹುದ್ದೆಗಳನ್ನು ವರ್ಷಗಟ್ಟಲೆ ತುಂಬದೆ ಉಳಿಸಿಕೊಂಡಿರುವ ಸರ್ಕಾರದ ಧೋರಣೆಯು ಯುವಜನರನ್ನು ಉದ್ಯೋಗದ ಹಕ್ಕಿನಿಂದ ವಂಚಿಸಿದ ಹಾಗೂ ಆಡ ಆಡಳಿತಯಂತ್ರ ದುರ್ಬಲಗೊಳ್ಳಲು ಕಾರಣವಾಗಿದೆ. ಒಂದು ಉದ್ಯೋಗ ಇಡೀ ಕುಟುಂಬದ ದಿಕ್ಕುದೆಸೆ ಬದಲಿಸುವ ಸಾಮರ್ಥ್ಯ ಹೊಂದಿರುತ್ತದೆ. ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯನ್ನು ಪೊಲೀಸರ ಮೂಲಕ ಹತ್ತಿಕ್ಕುವ ಪ್ರಯತ್ನವೂ ನಡೆದಂತಿದೆ. ಇಂಥ ಅಸೂಕ್ಷ್ಮ ನಡವಳಿಕೆ ಸರ್ಕಾರಕ್ಕೆ ಶೋಭೆ ತರುವಂತಹದ್ದಲ್ಲ. ಪ್ರತಿಭಟನಾಕಾರರ ಭಾವನೆಗಳಿಗೆ ಸರ್ಕಾರ ಸಹಾನುಭೂತಿಯಿಂದ ಸ್ಪಂದಿಸಬೇಕು.
ನೇಮಕಾತಿ ಪ್ರಕ್ರಿಯೆ ಮುಂದೆ ಹೋದಷ್ಟೂ ಉದ್ಯೋಗಾಕಾಂಕ್ಷಿಗಳ ಹತಾಶೆ ಹೆಚ್ಚುತ್ತದೆ. ಅವರನ್ನು ನೆಚ್ಚಿಕೊಂಡ ಕುಟುಂಬಗಳ ಸಂಕಷ್ಟವೂ ಮುಂದುವರಿಯುತ್ತದೆ. ನಿರುದ್ಯೋಗ ಸಮಸ್ಯೆ ಉಲ್ಬಣಗೊಳ್ಳಲು ರಾಜಕೀಯ ಪಕ್ಷಗಳು ನೇರ ಹೊಣೆಯಾಗಿವೆ. ಖಾಲಿ ಹುದ್ದೆಗಳನ್ನು ತುಂಬುವುದು ಹಾಗೂ ಹೊಸ ಉದ್ಯೋಗಗಳನ್ನು ಸೃಷ್ಟಿಸುವುದು ಯಾವ ಪಕ್ಷಕ್ಕೂ ಆದ್ಯತೆಯ ವಿಷಯವಾಗಿಲ್ಲ. ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಭರ್ತಿ ಆಗದಿರುವುದರಲ್ಲಿ ಆಡಳಿತ ಪಕ್ಷದಷ್ಟೇ ವಿರೋಧಪಕ್ಷದ ಹೊಣೆಗಾರಿಕೆಯೂ ಇದೆ. ನೇಮಕಾತಿಗಳು ನನೆಗುದಿಗೆ ಬಿದ್ದಿರುವುದಕ್ಕೆ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ರಾಜ್ಯ ಬಿಜೆಪಿ, ಅದೇ ಪ್ರಶ್ನೆಯನ್ನು ಕೇಂದ್ರ ಸರ್ಕಾರಕ್ಕೆ ಕೇಳುವುದಿಲ್ಲ. ಯುವಜನರನ್ನು ಓಟ್ ಬ್ಯಾಂಕ್ ರೂಪದಲ್ಲಷ್ಟೇ ನೋಡುವ ರಾಜಕೀಯ ಪಕ್ಷಗಳು, ನಿರುದ್ಯೋಗದ ಸಮಸ್ಯೆಯನ್ನು ಮರೆಮಾಚಲಿಕ್ಕಾಗಿ ಯುವಜನರನ್ನು ದಾರಿತಪ್ಪಿಸಲು ಪ್ರಯತ್ನಿಸಿವೆ. ನಿರುದ್ಯೋಗ ಸಮಸ್ಯೆ ಆರ್ಥಿಕ ಸಮಸ್ಯೆಯಾಗಿಯಷ್ಟೇ ಉಳಿಯದೆ ಸಾಮಾಜಿಕ ಬಿಕ್ಕಟ್ಟಾಗಿಯೂ ಪರಿಣಮಿಸಿರುವ ಸಂದರ್ಭದಲ್ಲಿ, ವಿಭಜಕ ರಾಜಕಾರಣಕ್ಕಿಂತಲೂ ಜೀವನ ನಿರ್ವಹಣೆಗೆ ಉದ್ಯೋಗ ಅಗತ್ಯ ಎನ್ನುವ ಅರಿವು ವಿದ್ಯಾರ್ಥಿ, ಯುವಜನರಲ್ಲಿ ಬಂದಿದೆ.
ಈ ನಡುವೆ ಕೇಂದ್ರದ ಬಿಜೆಪಿ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು. ಆದರೆಈ ನಡುವೆ ಕೇಂದ್ರದ ಬಿಜೆಪಿ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು. ಆದರೆ
ವರ್ಷದಿಂದ ವರ್ಷಕ್ಕೆ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆಯೇ ಹೊರತು ಕಡಿಮೆಯಾಗುತ್ತಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಖಾಲಿ ಇರುವ ಹುದ್ದೆಗಳನ್ನು ಪ್ರತಿವರ್ಷ ನಿಗದಿತವಾಗಿ ಭರ್ತಿ ಮಾಡಿಕೊಳ್ಳದೇ ಖಾಸಗೀಕರಣಕ್ಕೆ ಆದ್ಯತೆ ನೀಡುವ ಮೂಲಕ ಗುತ್ತಿಗೆ ಪದ್ಧತಿಯನ್ನು ಪರೋಕ್ಷವಾಗಿ ಜಾರಿಗೊಳಿಸುತ್ತಿರುವುದು ಈ ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ, ಯುವಜನರು ಹಾಗೂ ಉದ್ಯೋಗಾಕಾಂಕ್ಷಿಗಳ ಬೇಡಿಕೆಯಂತೆ ಕೂಡಲೇ ನೇಮಕಾತಿಗೆ ನೋಟಿಫಿಕೇಶನ್ ಹೊರಡಿಸಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ.
: ಬೇಡಿಕೆಗಳು :-
1) ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿಯಿರುವ 2,84,881 ಹುದ್ದೆಗಳನ್ನು ಹಂತ ಹಂತವಾಗಿ ಶೀಘ್ರವಾಗಿ ನೇಮಕಾತಿ ಮಾಡಿಕೊಳ್ಳಲೇಬೇಕು.
2) 50 ಸಾವಿರ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಕೂಡಲೇ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು.
3) ಕೇಂದ್ರ ಸರ್ಕಾರ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು.
4) ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದ್ದು, ಈ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಕೌಶಲ್ಯ ತರಬೇತಿ ಕೇಂದ್ರಗಳನ್ನು ಆರಂಭಿಸಿ, ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಒದಗಿಸಬೇಕು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡರಾದ ಪ್ರವೀಣ್ ದುಮತಿ ಇರ್ಫಾನ್ ವಕೀಲರು, ಪರಶುರಾಮ್ ಬೀರಪ್ಪ ಬಾಲರಾಜ್ ನಾಗರಾಜ್ ಶಬ್ಬೀರ್ ವಿವಿಧ ಕಾಲೇಜ್ ವಿದ್ಯಾರ್ಥಿಗಳ ಭಾಗವಯಿಸಿದ್ದರು

