ತಾಳಿಕೋಟಿ: ಪಟ್ಟಣದ ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ವಿಪಿಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನೀರಿನ ಸಮಸ್ಯೆ ಇದ್ದು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಆದಷ್ಟು ಬೇಗ ನೀರು ಒದಗಿಸಲು ಕ್ರಮ ವಹಿಸುವಂತೆ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರ ನಿಯೋಗ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್. ನಾಡಗೌಡ(ಅಪ್ಪಾಜಿ) ಇವರಿಗೆ ಮನವಿ ಸಲ್ಲಿಸಿದರು. ಗುರುವಾರ ಮುದ್ದೆಬಿಹಾಳ ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ನಿಯೋಗದ ಸದಸ್ಯರು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಅಪ್ಪಾಜಿ ನಾಡಗೌಡರು ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು ಇದರಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ತಿಳಿಸಿದರು. ಮನವಿಗೆ ಸ್ಪಂದಿಸಿದ ಶಾಸಕರಿಗೆ ಶಾಲೆಯ ಆಡಳಿತ ಮಂಡಳಿ ನಿಯೋಗದ ಪರವಾಗಿ ಸಂಸ್ಥೆಯ ಮುಖ್ಯಸ್ಥರಾದ ಫಾದರ್ ಸುನೀಲ ಅಂದ್ರಾದೆ ಧನ್ಯವಾದಗಳು ತಿಳಿಸಿದರು. ಈ ಸಮಯದಲ್ಲಿ ಸಿಸ್ಟರ್ ಐರಿನ್ ತವರು,ಸಿಸ್ಟರ್ ಸ್ಟೆಲ್ಲಾ, ಪ್ರಸಾದ ಗಟ್ಟಿ ಇದ್ದರು.

