ರಾಯಚೂರು ಫೆಬ್ರವರಿ 27 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕೊತ್ತದೊಡ್ಡಿ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 2026-27ನೇ ಸಾಲಿನಲ್ಲಿ ಏಳನೇ ಹಾಗೂ ಒಂಬತ್ತನೇ ತರಗತಿಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಆಪ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಅವಧಿಯನ್ನು ಮಾರ್ಚ್ 3ರವರೆಗೆ ವಿಸ್ತರಣೆ ಮಾಡಲಾಗಿದೆ.
ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಕೇಂದ್ರೀಯ ಪಠ್ಯಕ್ರಮವನ್ನು (ಸಿಬಿಎಸ್‌ಇ) ಹೊಂದಿದೆ. ವಿವಿಧ ವರ್ಗಗಳ 6-8ನೇ ತರಗತಿಯಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರವೇಶಾತಿಯು ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಂಘ, ನವ ದೆಹಲಿ ಅವರು ರೂಪಿಸಿರುವ ನಿಯಮಗಳಿಗೆ ಬದ್ಧವಾಗಿದ್ದು, ಪ್ರವೇಶಾತಿ ಪರೀಕ್ಷೆಯ ಮೂಲಕ ಸಂಪೂರ್ಣ ಪಾರದರ್ಶಕವಾಗಿ ಪ್ರವೇಶಾತಿಯನ್ನು ಕಲ್ಪಿಸಲಾಗುತ್ತಿದ್ದು, ಆಸಕ್ತ ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿಯನ್ನು ಮಾರ್ಚ್ 03ರ ಸಂಜೆ 05ಗಂಟೆಯೊಳಗಾಗಿ ಕೊತ್ತದೊಡ್ಡಿ ಏಕಲವ್ಯ ಮಾದರಿ ವಸತಿ ಶಾಲೆಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರವೇಶಾತಿ ಸಮಿತಿ ಸಂಚಾಲಕರಾದ ರವಿಕುಮಾರ್ ಜಿ., 7090104974, ಮಹಾದೇವ್ ಜಾಧವ್ 9901528675ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಕೊತ್ತದೊಡ್ಡಿ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
