ತಾಲೂಕಾಡಳಿತ, ನಗರಸಭೆ, ತಾಲೂಕು ಪಂಚಾಯತಿ, ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.
ಮೊದಲಿಗೆ ತಹಶೀಲ್ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪೂಜೆ ನೆರವೇರಿಸಿ, ನಗರದ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಸಮಾಜದ ಮುಖಂಡರು, ಜನಪ್ರತಿನಿಧಿಗಳು, ಹೂವಿನಹಾರ ಹಾಕಿ ಜೈಕಾರ ಹಾಕಿದರು.
ಈ ವೇಳೆ ತಾಲೂಕು ದಂಡಾಧಿಕಾರಿ ಅರುಣ್ ಕುಮಾರ್ ದೇಸಾಯಿ ಸಂವಿಧಾನ ಪೀಠಿಕೆ ಓದಿದರು. ನಂತರ ಸಾರೋಟದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಟೌನ್ ಹಾಲ್ ನವರೆಗೂ ಶಾಲೆ ವಿದ್ಯಾರ್ಥಿಗಳೊಂದಿಗೆ ಭವ್ಯ ಮೆರವಣಿಗೆ ಮಾಡಲಾಯಿತು. ಟೌನ್ ಹಾಲ್ ನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು.
ಈ ಸಮಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ: ಶಾಸಕ ಹಂಪನಗೌಡ ಬಾದರ್ಲಿ, ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಹಿರೇಮಠ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಮರಿಯಪ್ಪ, ಆರ್.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಪೌರಾಯುಕ್ತ ಪಾಂಡುರಂಗ ಇಟಗಿ, ಇಒ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲಿಂಗಪ್ಪ, ವಸತಿ ನಿಲಯ ಅಧಿಕಾರಿ ಲಿಂಗಪ್ಪ ಅಂಗಡಿ, ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.

