ಭಾರತ ಸಂವಿಧಾನ ದಿನದ ಅಂಗವಾಗಿ ಬುಧವಾರ ನೋಬಲ್ ಟೆಕ್ನೋ ಶಾಲೆಯಲ್ಲಿ ಸಂವಿಧಾನ ದಿನವನ್ನು ಗೌರವಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಮ್ಯಾನೇಜ್ಮೆಂಟ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಭಾರತ ಸಂವಿಧಾನದ ಪ್ರಸ್ತಾವಿಕೆಯನ್ನು ಓದಿ ಪ್ರತಿಜ್ಞೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಎಲ್ಲರೂ ಸಂವಿಧಾನದ ತತ್ವಗಳನ್ನು ಜೀವನದಲ್ಲಿ ಅನುಸರಿಸುವುದಾಗಿ, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಬಾಂಧವ್ಯ ಮೌಲ್ಯಗಳನ್ನು ಕಾಪಾಡುವುದಾಗಿ ಪ್ರತಿಜ್ಞೆ ಮಾಡಿದರು.
ನಂತರ ಶಾಲೆಯ ಆಡಳಿತಧಿಕಾರಿ ಸೈಯದ್ ತನವೀರ್ ಮಾತನಾಡಿ, ದೇಶದ ಪ್ರತಿಯೊಬ್ಬ ನಾಗರಿಕನು ಸಂವಿಧಾನದ ಮೌಲ್ಯಗಳನ್ನು ತಿಳಿದು, ಅವನ್ನು ದಿನನಿತ್ಯದ ನಡೆ–ನುಡಿಯಲ್ಲಿ ಅಳವಡಿಸಿಕೊಳ್ಳಬೇಕು ನಮ್ಮ ನೋಬಲ್ ಟೆಕ್ನೋ ಶಾಲೆಯು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬದ್ಧವಾದ ವಿದ್ಯಾಸಂಸ್ಥೆಯಾಗಿದೆ.
ಈ ಸಂವಿಧಾನವು ನಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ತಿಳಿಸುವ ಮಹತ್ವದ ದಸ್ತಾವೇಜು ಎಂದು ಒತ್ತಿಹೇಳಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞೆಯನ್ನು ಮಾಡಿಸಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಸಂವಿಧಾನ ಓದುವುದು ಕೇವಲ ಆಚರಣೆ ಅಲ್ಲ, ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವ ದಾರಿಯ ಮೊದಲ ಹೆಜ್ಜೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಇಂದು ಪಡೆದ ಪ್ರೇರಣೆಯಿಂದ ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡುವುದಾಗಿ ಹಾಗೂ ಸಂವಿಧಾನದ ಗೌರವವನ್ನು ಉಳಿಸುವುದಾಗಿ ಸಂಕಲ್ಪವನ್ನೂ ವ್ಯಕ್ತಪಡಿಸಿದರು ಎಂದು ಶಾಲೆಯ ಮುಖ್ಯೋಪಾಧ್ಯಾಯನಿ ಶಾಜಿಯ ಪತ್ರಿಕೆಗೆ ಮಾಹಿತಿಯನ್ನು ನೀಡಿದರು.

