ತಾಳಿಕೋಟಿ: ಶ್ರೀ ರೇಣುಕಾಚಾರ್ಯರ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಜಂಗಮ ಸಮಾಜದ ತಾಲೂಕ ಘಟಕದ ಗೌರವಾಧ್ಯಕ್ಷರಾದ ಪರಮ ಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಶ್ರೀ ರೇಣುಕಾಚಾರ್ಯರ ಮೂರ್ತಿಯ ಭವ್ಯ ಮೆರವಣಿಗೆ ಭಾನುವಾರ ಜರುಗಿತು. ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ರಾಮಲಿಂಗಯ್ಯ ಮಹಾಸ್ವಾಮಿಗಳು ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಪಟ್ಟಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಜಂಗಮ ಸಮಾಜದ ಜೊತೆಗೆ ಪಟ್ಟಣದ ಸರ್ವ ಸಮಾಜದ ಬಾಂಧವರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು. ಸಾಸನೂರ- ತುಂಬಗಿ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಮೆರವಣಿಗೆಯಲ್ಲಿ ತಾಲೂಕ ಜಂಗಮ ಸಮಾಜದ ಅಧ್ಯಕ್ಷ ಶರಣಯ್ಯ ಹಿರೇಮಠ, ಶ್ರೀ ಗುರು ಹಿರೇಮಠ, ಶಿವಶಂಕರ ಹಿರೇಮಠ, ಉಪಾಧ್ಯಕ್ಷ ಶಿವಲಿಂಗಯ್ಯ ಹಿರೇಮಠ ಕಾರ್ಯದರ್ಶಿ ಈರಯ್ಯ ಹಿರೇಮಠ, ಸಂಘಟನಾ ಕಾರ್ಯದರ್ಶಿ ಗಜದಂಡಯ್ಯ ಹಿರೇಮಠ, ಶಿವಶಂಕರ ಹಿರೇಮಠ, ಓಂ ಪ್ರಕಾಶ ಡೋಣೂರಮಠ, ಶಾಂತಯ್ಯ ಹಿರೇಮಠ, ಸಿದ್ದರಾಮಯ್ಯ ಹಿರೇಮಠ, ಸುಜಾತಾ ರಾಮಗಿರಿಮಠ, ಬಸ್ಸಯ್ಯ ಹಿರೇಮಠ, ಶಾಂತಯ್ಯ ಹಿರೇಮಠ, ಗುರುಪಾದಯ್ಯ ಹಿರೇಮಠ, ಶಂಕ್ರಯ್ಯ ಹಿರೇಮಠ, ಚಂದ್ರಶೇಖರಯ್ಯ ಹಿರೇಮಠ, ತಾಲೂಕ ಬೇಡ ಜಂಗಮ ಸಮಾಜದ ಗಣ್ಯರು, ಹಿರಿಯರು ಹಾಗೂ ಮಹಿಳೆಯರು ಇದ್ದರು.

Leave a Reply

Your email address will not be published. Required fields are marked *