ಮುದಗಲ್: ಸ್ಥಳೀಯ ಸಹನಾ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸುವಲ್ಲಿ ಯಶಸ್ವಿಯಾಯಿತು. ಮೊದಲನೆಯದಾಗಿ ಶಾಲಾ ಶಿಕ್ಷಕ- ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಭೋದಿಸಲಾಯಿತು. ನಂತರ ಶಾಲೆಯ ಮುಖ್ಯೋಪಾಧ್ಯಾಯ ಆದಪ್ಪ ಅವರು ಮಾತನಾಡಿ, “ವಿಜ್ಞಾನವು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೆ, ದೈನಂದಿನ ಜೀವನದ ಭಾಗವಾಗಬೇಕು,” ಎಂದು ಕರೆ ನೀಡಿದರು. ಇಂದಿನ ವಿದ್ಯಾರ್ಥಿಗಳೇ ನಾಳೆಯ ವಿಜ್ಞಾನಿಗಳು. ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಹೊಸ ಆವಿಷ್ಕಾರಗಳು ಸಾಧ್ಯ.” ಎಂದು ಶಾಲೆಯ ಶಿಕ್ಷಕಿಯಾದ ಪ್ರಿಯಾಂಕ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಆಯೇಶಾ ಬಾನು, ಕವಿತಾ, ಹೀನ ಬೇಗಂ, , ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕಿಯಾದ ಅಸ್ಮ ಬೇಗಂ ನಿರೂಪಿಸಿದರು.

Leave a Reply

Your email address will not be published. Required fields are marked *