ಲಿಂಗಸಗೂರು : ಮಾ 3 ಕೃಷ್ಣಾ ಮೇಲ್ದಂಡೆ ಯೋಜನೆಯ ನಂದವಾಡಗಿ ಏತ ನೀರಾವರಿ ಯೋಜನೆಯಿಂದ ಹನಿ ನೀರಾವರಿ ಬದಲು ಹರಿ ನೀರಾವರಿ ಯೋಜನೆಯನ್ನಾಗಿ ಮಾರ್ಪಡಿಸಬೇಕೆಂದು ಒತ್ತಾಯಿಸಿ ನಂದವಾಡಗಿ ಏತ ನೀರಾವರಿ ಹೋರಾಟ ಸಮಿತಿಯ ಸದಸ್ಯರು ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ನಂದವಾಡಗಿ ಏತನೀರಾವರಿ ಕಾಮಗಾರಿಗೆ 2,100 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಟೆಂಡರ್ ಕರೆದು 2020-21 ರ ವೇಳೆಗೆ ಮುಗಿಯಬೇಕಿದ್ದ ಕಾಮಗಾರಿ ಇನ್ನೂ ಮುಗಿದಿಲ್ಲ. ಆದರೂ ಗುತ್ತಿಗೆದಾರರಿಗೆ ಶೇ.90 ಹಣ ಪಾವತಿಸಲಾಗಿದೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ
ಸಮಿತಿ ಅಧ್ಯಕ್ಷ ಸಿದ್ರಾಮಪ್ಪ ಸಾಹುಕಾರ, ಬಸವಂತರಾಯ ಕುರಿ, ಎಚ್.ಬಿ ಮುರಾರಿ, ಶರಣಗೌಡ ಬಸಾಪೂರ, ಬಸವರಾಜ ಅಂಗಡಿ, ರಮೇಶ ಶಾಸ್ತ್ರಿ ಸೇರಿದಂತೆ ಇತರರು ಇದ್ದರು.

