ರಾಯಚೂರು ಮಾರ್ಚ್ 03 (ಕರ್ನಾಟಕ ವಾರ್ತೆ): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ 2026ರ ಮಾರ್ಚ್ 03ರ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಗೆ ಒಟ್ಟು 1,214 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ.
ಜಿಲ್ಲೆಯ 43 ಪರೀಕ್ಷೆ ಕೇಂದ್ರಗಳಲ್ಲಿ ಇಂಗ್ಲೀಷ್ ವಿಷಯದಲ್ಲಿ ಒಟ್ಟು 20,540 ನೋಂದಣಿಯಾಗಿದ್ದು, 19,326 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರಪ್ಪ ಹೊಕ್ರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
