ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜನಜಾಗೃತಿ ಸಮಿತಿ ತಾಲೂಕು ಘಟಕದ ವತಿಯಿಂದ ರಾಜ್ಯದ ಗೃಹ ಸಚಿವರಿಗೆ ಉಪ ತಹಶೀಲ್ದಾರ್ ವಿನಾಯಕರಾವ್ ಅವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿ ತಾಲೂಕು ಘಟಕದ ಸಂಚಾಲಕ ದುರ್ಗಪ್ಪ, ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದೂ ಸಮುದಾಯದವರ ಮೇಲೆ, ಮನೆಗಳ ಮೇಲೆ ಹಾಗೂ ಶಾಂತಿಯುತವಾಗಿ ನಡೆಯುತ್ತಿರುವ ಮೆರವಣಿಗೆಗಳ ಮೇಲೆ ದಾಳಿ ನಡೆಸುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, ಇದು ಕಾನೂನು–ಸುವ್ಯವಸ್ಥೆಗೆ ಧಕ್ಕೆಯಾಗಿದೆ. ದಾಳಿಕೋರರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಬಾಗಲಕೋಟೆ, ಚಿಕ್ಕಮಗಳೂರು, ಬೈಲೂರು, ಮುರುಡೇಶ್ವರ ಹಾಗೂ ಶಿವಮೊಗ್ಗದ ಊರಗಡೂರು ಪ್ರದೇಶಗಳಲ್ಲಿ ನಡೆದ ಘಟನೆಗಳ ಕುರಿತು ವಿಶೇಷ ತನಿಖಾ ತಂಡಗಳನ್ನು ರಚಿಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕು. ಎನ್‌.ಐ‌.ಎ ಮೂಲಕ ಸಮಗ್ರ ತನಿಖೆ ನಡೆಸಬೇಕು. ಅಪರಾಧಿಗಳ ವಿರುದ್ಧ ಕೋಕಾ ಕಾಯಿದೆಯಡಿ ಕ್ರಮ ಕೈಗೊಳ್ಳಬೇಕು. ಹಿಂದೂಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಹಾಗೂ ಮೆರವಣಿಗೆಗಳ ವೇಳೆ ಹೆಚ್ಚುವರಿ ಭದ್ರತೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ ಸಂಚಾಲಕರಾದ ವಿಜಯಕುಮಾರ ಇಭ್ರಂಪುರ್, ರವಿಕುಮಾರ, ನಾಗಭೂಷಣ, ಮಂಜುನಾಥ ಗೌಡ, ಮಾರುತಿನಾಯಕ, ಮಲ್ಲಪ್ಪ, ನಿಂಗಪ್ಪ, ನಾಗರಾಜ್, ಸುರೇಶನಾಡಗೌಡ, ಸಂಗಮೇಶ, ಪ್ರಾಣೇಶ, ನಾಗರಾಜ ಶೆಟ್ಟಿ, ರಾಘವೇಂದ್ರ, ನಾಯಕ, ದತ್ತು, ನರಸಿಂಹ ಹೆಚ್., ಅಜಯ್, ಅಯ್ಯಪ್ಪ ಕೆ., ಆಂಜನೇಯ್ಯನಾಯಕ ಜಲ್ಲಿ ನೀರಮಾನ್ವಿ, ಶಾಂತಕುಮಾರ್, ಕೊಂದಯ್ಯ, ವೀರೇಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *