ಜಿಲ್ಲಾ ಪಂಚಾಯತ್ ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳ ಸಹಯೋಗದಲ್ಲಿ ಈಚೆಗೆ ನಡೆದ 2025-26ನೇ ಸಾಲಿನ ಕೊಪ್ಪಳ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ನಾಯಕ ಅವರು ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅವರ ಸಾಧನೆಗೆ ತಾಪಂ ಇಒ ಕೆ. ರಾಜಶೇಖರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

