ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಾರ್ಚ್‌ 6ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಈ ವಾಕ್ ಇನ್ ಸಂದರ್ಶನ ನಡೆಯಲಿದೆ.
ಮಾರ್ಚ್ 6ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರ ತನಕ ಈ ವಾಕ್ ಇನ್ ಇಂಟರ್‌ವ್ಯೂವ್‌ ನಡೆಯಲಿದೆ.ಮೆಡ್‌ಫ್ಲಸ್ ಬೆಂಗಳೂರು ಸಂಸ್ಥೆಯು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನವನ್ನು ನಡೆಸಿ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಹುದ್ದೆಗಳು ಫಾರ್ಮ್ಸಿಸ್ಟ್ (ರಜಿಸ್ರ‍್ಡ್ ಫಾರ್ಮ್ಸಿಸ್ಟ್ ಕೆಎಸ್‌ಪಿಸಿ ಇಂದ), ಫಾರ್ಮ್ಸಿಯೇಡ್ (ಕನಿಷ್ಟ 2 ವರ್ಷ ಮೆಡಿಕಲ್ ಶಾಫ್‌ನಲ್ಲಿ ಅನುಭವ), ಕಸ್ಟಮರ್ ಸರ್ವೀಸ್ ಅಸೋಶಿಯೇಟ್‌ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಡಿ-ಫಾರ್ಮ್, ಬಿ-ಫಾರ್ಮ್ ಇತರೆ ಪದವಿ (ಬಿಇ ಪದವಿ ಹೊರತು ಪಡಿಸಿ) ಅಭ್ಯರ್ಥಿಗಳು ನೇರ ಈ ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ಆಸಕ್ತ 18 ರಿಂದ 35 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.

ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳು 2 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡ್‌ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವು ಪಡೆಯಬಹುದಾಗಿದೆ.

ಉದ್ಯೋಕಾಂಕ್ಷಿಗಳು https://forms.gle/rSKrLmuqyH8RFgo29 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಿ.

Leave a Reply

Your email address will not be published. Required fields are marked *