Latest Post

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ: RO, ARO ನೇಮಕಕ್ಕೆ ನ.16ರ ಗಡುವು – ಚುನಾವಣಾ ಆಯೋಗದಿಂದ ಜಿಲ್ಲಾಧಿಕಾರಿಗಳಿಗೆ ಸೂಚನೆ *ನಾಡಿನ ಅಸ್ಮಿತೆ ಕಾಪಾಡುವಲ್ಲಿ ಮತ್ತು ಪ್ರತಿಭೆಗಳನ್ನು ಪ್ರೋತ್ಸಾಹಿಸುವಲ್ಲಿ ಕನ್ನಡ ಹಿತರಕ್ಷಕ ಸಂಘದ ಸೇವೆ ಅನನ್ಯ : ಶಾಸಕ ಜೆ.ಎ.ನ್. ಗಣೇಶ್* *ಅರಕೇರಾ ತಾಲೂಕಿನ ಮದರ್ ಕಲ್ ಗ್ರಾಮದ ಅಂಬಾ ಮಠದ ಬಗ್ಗೆ ಹೊರಗಿನವರು ತಪ್ಪು ಮಾಹಿತಿ ಹರಡಬಾರದು: ಚಿನ್ನಪ್ಪ ದೊಡ್ಡಮನಿ* *ಸಂಕೇಶ್ವರಾಳ ಬಸ್ ನಿಲ್ದಾಣ ತೆರವಿಗೆ ಜಿ.ಪಂ. ಅಧಿಕಾರಿಗಳ ಕ್ರಮ* ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು

ಸಸ್ಯೋದ್ಯಾನ ನಿರ್ಮಾಣಕ್ಕಾಗಿ ಶಾಸಕರಿಗೆ ಮನವಿ

ತಾಳಿಕೋಟೆ: ಪಟ್ಟಣದಲ್ಲಿ ಟ್ರೀ ಪಾರ್ಕ್( ಸಸ್ಯೋದ್ಯಾನ) ನಿರ್ಮಾಣ ಹಾಗೂ ಉದ್ಯಾನಗಳ ಅಭಿವೃದ್ಧಿಗೆ ನೆರವಾಗುವಂತೆ ಒತ್ತಾಯಿಸಿ ಹಸಿರು ಸಂಪದ ಬಳಗದ ವತಿಯಿಂದ ಶಾಸಕ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಶ್ರೀ ಸಿ ಎಸ್ ನಾಡಗೌಡ (ಅಪ್ಪಾಜಿ) ರವರಿಗೆ ಮನವಿ ಅರ್ಪಿಸಲಾಯಿತು.ಸುಂದರ…

ರಾಮಲಿಂಗಯ್ಯ ಶ್ರೀಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ : ತಾಲೂಕಿನ ಚಬನೂರ ಗ್ರಾಮದಲ್ಲಿ ಸಿದ್ಧಿ ಪುರುಷ ಲಿಂಗೈಕ್ಯ ರಾಮಲಿಂಗೇಶ್ವರ ನೂತನ ಮಠ ಹಾಗೂ ಕಲ್ಯಾಣ ಮಂಟಪ ಉದ್ಘಾಟನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಜ್ಯೋತಿಷ್ಯ ರತ್ನ ಪರಮಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಮುಖಂಡ ಬಸನಗೌಡ ಪಾಟೀಲ ಯಡಿಯಾಪೂರ ಅವರು ಗೌರವ ಸಮರ್ಪಣೆ…

ಕಾರ್ಯಕ್ರಮದ ಯಶಸ್ವಿಗೆ ಸದ್ಭಕ್ತರ ಸಹಕಾರ ಇರಲಿ ಶಿವಪ್ರಕಾಶ ಶ್ರೀ

ತಾಳಿಕೋಟಿ: ಈ ಭಾಗದ ಸಿದ್ದಿ ಪುರುಷರಾದ ಲಿಂಗೈಕ್ಯ ಶ್ರೀರಾಮಲಿಂಗೇಶ್ವರ ಮಹಾಸ್ವಾಮಿಗಳ ನೂತನ ಮಠ ಹಾಗೂ ಕಲ್ಯಾಣ ಮಂಟಪವನ್ನು ನಿರ್ಮಾಣ ಮಾಡಿ ರಾಮಲಿಂಗಯ್ಯ ಶ್ರೀಗಳು ಪುಣ್ಯದ ಕಾರ್ಯವನ್ನು ಮಾಡಿದ್ದಾರೆ ಇದರ ಉದ್ಘಾಟನಾ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಸದ್ಭಕ್ತರ ಸಹಾಯ ಸಹಕಾರ ಅವರೊಂದಿಗಿರಲಿ ಎಂದು…

ಶಿಕ್ಷಕ ಹಿರೇಹೊಳಿಗೆ ರಾಜ್ಯ ಸೇವಾರತ್ನ ಪ್ರಶಸ್ತಿ ಪ್ರದಾನ

ತಾಳಿಕೋಟಿ: ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಕರ್ನಾಟಕ ಮತ್ತು ಯುಗದರ್ಶಿನಿ ಮಹಿಳಾ ಪೌಂಡೇಷನ್,ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ಕವಿ–ಕಾವ್ಯ ಸಂಭ್ರಮ — 2025 ರ ಕಾರ್ಯಕ್ರಮದಲ್ಲಿ ಶನಿವಾರ ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ಹಿಂದಿ ವಿಷಯ ಶಿಕ್ಷಕ ಬಿ.ಆಯ್.ಹಿರೇಹೊಳಿ ಇವರಿಗೆ ಅವರು…

ಕೆರೆ-ಕಟ್ಟೆಗಳ ಪುನಃಶ್ಚೇತನಕ್ಕೆ ಪ್ರಯತ್ನ: ಎನ್.ಎಸ್. ಬೋಸರಾಜು

ರಾಯಚೂರು: ‘ಜಿಲ್ಲೆಯಲ್ಲಿ ಕೆರೆ-ಕಟ್ಟೆಗಳ ಸಂರಕ್ಷಣೆ ಮೂಲಕ ಅಂತರ್ಜಲ ವೃದ್ಧಿಗಾಗಿ ವೈಜ್ಞಾನಿಕ ಯೋಜನೆಗಳನ್ನು ರೂಪಿಸಲಾಗುತ್ತಿದೆ’ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು. ನಗರದ ನೀರಭಾವಿಕುಂಟೆ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಅವರು…

ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಅನುಕೂಲ: ಎಸ್.ಆರ್.ಮೆಹರೋಜ್ ಖಾನ್

ರಾಯಚೂರು ಡಿಸೆಂಬರ್ 22 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಗೃಹ ಜ್ಯೋತಿ ಹಾಗೂ ಶಕ್ತಿ ಯೋಜನೆಗಳು ಸಮಾಜದಲ್ಲಿನ ಎಲ್ಲ ವರ್ಗದ ಜನರ ಆರ್ಥಿಕ ಸಬಲತೆಗೆ ಕಾರಣವಾಗಿವೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ…

ರಾಯಚೂರಿನಲ್ಲಿ ಸಿರಿಧಾನ್ಯಗಳ ಜಾಗೃತಿ ಜಾಥಾಕ್ಕೆ ಸಚಿವ ಎನ್.ಎಸ್.ಬೋಸರಾಜು ಚಾಲನೆ

ರಾಯಚೂರು ಡಿಸೆಂಬರ್ 22 (ಕರ್ನಾಟಕ ವಾರ್ತೆ): ಇಲ್ಲಿನ ಕೃಷಿ ಇಲಾಖೆಯಿಂದ ಸಿರಿಧಾನ್ಯ, ಸಾವಯವ ಉತ್ಪನ್ನಗಳ ಕುರಿತು ಗ್ರಾಹಕರಿಗೆ ಜಾಗೃತಿ ಮೂಡಿಸಲು ಸಿರಿಧಾನ್ಯಗಳ ನಡಿಗೆ ರೋಡ್ ಶೋ ಕಾರ್ಯಕ್ರಮಕ್ಕೆ ಡಿಸೆಂಬರ್ 22ರಂದು ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು…

ರಾಯಚೂರು ಉತ್ಸವಕ್ಕೆ ಸಿದ್ಧತೆ ಈ ಕ್ಷಣದಿಂದಲೇ ಆರಂಭವಾಗಲಿ; ಜಿಲ್ಲಾಧಿಕಾರಿ ನಿತೀಶ್ ಕೆ. ನಿರ್ದೇಶನ

ರಾಯಚೂರು ಡಿಸೆಂಬರ್ 22 (ಕರ್ನಾಟಕ ವಾರ್ತೆ): ಬಹುವರ್ಷಗಳ ನಂತರ ಜಿಲ್ಲೆಯಲ್ಲಿ 2026ರ ಜನವರಿ 29, 30 ಹಾಗೂ 31ರಂದು ಮೂರು ದಿನಗಳ ಕಾಲ ರಾಯಚೂರು ಉತ್ಸವ ನಿಗದಿಯಾಗಿದೆ. ಈ ಉತ್ಸವ ರಾಯಚೂರು ನಗರಕ್ಕಷ್ಟೇ ಸೀಮಿತವಲ್ಲ; ಇಡೀ ಜಿಲ್ಲೆಯ ಉತ್ಸವವಾಗಿದೆ. ಜಿಲ್ಲೆಯಲ್ಲಿನ ಎಲ್ಲ…

ಗ್ರಾಮ ಪಂಚಾಯತ್ ಆರ್.ಎಚ್. ನಂಬರ್–1 ವ್ಯಾಪ್ತಿಯಲ್ಲಿ ಮಕ್ಕಳ ಗ್ರಾಮ ಸಭೆ ಯಶಸ್ವಿ

ಗ್ರಾಮ ಪಂಚಾಯತ್ ಆರ್.ಎಚ್. ನಂಬರ್–1 ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಲ್ಲಿ ನಾಯಕತ್ವ ಗುಣಗಳು, ಹಕ್ಕುಗಳ ಅರಿವು ಹಾಗೂ ನಾಗರಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ಗ್ರಾಮ ಸಭೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ…

ಆತ್ಮರಕ್ಷಣೆ ಸ್ಥೈರ್ಯ ಹೆಚ್ಚಿಸಲು ಕರಾಟೆ ಸಹಕಾರಿ;ಬಸವರಾಜ ಹುಡೇದ್

ಸಿಂಧನೂರು:ರಾಜ್ಯ ಸರ್ಕಾರದ ಯೋಜನೆಯ ಕರಾಟೆ ಹೆಣ್ಣುಮಕ್ಕಳು ಕಲಿಯುವುದರಿಂದ ಆತ್ಮರಕ್ಷಣೆ ಸ್ಥೈರ್ಯ ಹೆಚ್ಚಿಸಲು ಕರಾಟೆ ಸಹಕಾರಿಯಾಗಲಿದೆ ಎಂದು ಸರಕಾರಿ ಪ್ರೌಢಶಾಲೆ ವೀರಾಪುರ ಮುಖ್ಯಗುರು ಬಸವರಾಜ ಹುಡೇದ್ ಹೇಳಿದರು. ಅವರು ತಾಲೂಕಿನ ಸರಕಾರಿ ಪ್ರೌಢಶಾಲೆ ವೀರಾಪುರ ಕರಾಟೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.…